ನವದೆಹಲಿ, ಫೆ 26(DajiworldNews/SK): ಉದ್ಯೋಗಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕ ಮೂಲದ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿತ್ತು. ಇದೀಗ ಯುದ್ಧಪೀಡಿತ ರಷ್ಯಾದಲ್ಲಿ ಸಿಲುಕಿಕೊಂಡಿರುವ ಹಲವು ಮಂದಿ ಭಾರತೀಯರನ್ನು ಬಿಡುಗಡೆಗೊಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ವರದಿ ಮಾಡಿದೆ.
ಹಲವಾರು ಭಾರತೀಯರು ರಷ್ಯಾದ ಮಿಲಿಟರಿಯಲ್ಲಿ ಭದ್ರತಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ರಷ್ಯಾದ ಗಡಿಯುದ್ದಕ್ಕೂ ಕೆಲವು ಪ್ರದೇಶಗಳಲ್ಲಿ ರಷ್ಯಾದ ಸೈನಿಕರೊಂದಿಗೆ ಉಕ್ರೇನ್ ವಿರುದ್ಧ ಯುದ್ಧ ಮಾಡಲು ಅವರನ್ನು ಒತ್ತಾಯಿಸಲಾಗಿದೆ ಎಂದೂ ವರದಿಯಾಗಿತ್ತು.
ಇದೀಗ ವರದಿಯಾ ಪ್ರಕಾರ, ಮಾಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತರಲಾದ ಅಂತಹ ಪ್ರತಿಯೊಂದು ಪ್ರಕರಣವನ್ನು ರಷ್ಯಾದ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಚರ್ಚಿಸಿ, ಬಿಡುಗಡೆಗೆ ಒತ್ತಾಯಿಸಲಾಗಿತ್ತು.
ರಷ್ಯಾ ಸೇನೆಯಿಂದ ಭಾರತೀಯ ಪ್ರಜೆಗಳ ಬಿಡುಗಡೆ ಕುರಿತಂತೆ ರಷ್ಯಾದ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಮಾತುಕತೆ ನಡೆಸಿದ ಪರಿಣಾಮ ಹಲವು ಭಾರತೀಯರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದೂ ವರದಿಯಾಗಿದೆ.