ಬೆಂಗಳೂರು, ಫೆ 27 (DaijiworldNews/HR): ಸೋಲು ನಮಗೆ ಮತ್ತು ನಮ್ಮ ಕುಟುಂಬಕ್ಕೆ ಹೊಸದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಮೈತ್ರಿ ಕೂಟಕ್ಕೆ ಎರಡನೇ ಸೋಲು ವಿಚಾರವಾಗಿ ಮಾತನಾಡಿದ ಅವರು, ನಮ್ಮೆಲ್ಲ ಶಾಸಕರೂ ನಮ್ಮ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಸೋಮಶೇಖರ್ ನಡೆ ನಿರೀಕ್ಷಿತವೇ ಆಗಿತ್ತು ಎಂದರು.
ಇನ್ನು ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ನಿನ್ನೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕರೆದುಕೊಂಡು ಹೋದವರು ಯಾರು ಎಂದು ನಮಗೂ ಗೊತ್ತಿದೆ ಎಂದಿದ್ದಾರೆ.