ಚಿಕ್ಕಮಗಳೂರು, ಫೆ 28 (DaijiworldNews/HR): ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತ ಮಹಿಳೆಯನ್ನು ಕಾರ್ಮಿಕ ಮಹಿಳೆ ಕೊಟ್ರಮ್ಮ (43) ಎಂದು ಗುರುತಿಸಲಾಗಿದೆ.
ಕೊಪ್ಪ ತಾಲ್ಲೂಕಿನ ನುಗ್ಗಿ ಗ್ರಾ.ಪಂ ವ್ಯಾಪ್ತಿಯ ದೇವಗನ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯಾಗಿದ್ದು, ಕೆಲ ದಿನಗಳ ಹಿಂದೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇನ್ನು ಮಹಿಳೆಯ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದರು ಎನ್ನಲಾಗಿದ್ದು ವರದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿತ್ತು.