ಬೆಂಗಳೂರು, ಫೆ 29 (DaijiworldNews/MS): ಕರ್ನಾಟಕ ಸರ್ಕಾರವು 'ಭೂ ಜಿಹಾದ್'ನಲ್ಲಿ ತೊಡಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಈ ಬಗ್ಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್, 500 ಕೋಟಿಗೂ ಹೆಚ್ಚು ಮೌಲ್ಯದ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲು ನಿರ್ಧರಿಸಿದ ಕ್ರಮವನ್ನು ಪ್ರಶ್ನಿಸಿದ್ದಾರೆ.
ಜೊತೆಗೆ ಟ್ವಿಟ್ ಮಾಡಿ ಪ್ರಶ್ನಿಸಿರುವ ಅವರು, "ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್ ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ ಸಿದ್ದರಾಮಯನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ? ಖಾಲಿ ಜಾಗ ನೀಡಿದರೆ ನಮ್ಮ ಅಭ್ಯಂತರವಿಲ್ಲ. ಆದರೆ, ಪಶು ಸಂಗೋಪನಾ ಇಲಾಖೆಗೆ ಸೇರಿದ ಜಾಗವನ್ನು ಸರ್ಕಾರ ಹಸ್ತಾಂತರಿಸುತ್ತಿದೆ' ಎಂದು ಪ್ರಶ್ನಿಸಿದ್ದಾರೆ.