ನವದೆಹಲಿ, ಮಾ 02(DaijiworldNews/SK): ಮುಂಬರುವ ದಿನಗಳಲ್ಲಿ ಕ್ರಿಕೆಟ್ ಗೆ ಹೆಚ್ಚು ಒತ್ತು ನೀಡುವ ಕಾರಣದಿಂದ ರಾಜಕೀಯದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ನೀಡಿದ ಅವರು, “ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದ ನಾನು ನನ್ನ ಮುಂಬರುವ ಕ್ರಿಕೆಟ್ ಹೆಚ್ಚು ಗಮನಹರಿಸಬಹುದು ಎಂದಿದ್ದಾರೆ.
ಇನ್ನು ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.
ಈ ಸುದ್ದಿ ಹರಡುತ್ತಿದಂತೆ 2024 ರ ಲೋಕಸಭೆ ಚುನಾವಣೆಗೆ ಗಂಭೀರ್ ಗೆ ಟಿಕೆಟ್ ಸಿಗುವುದಿಲ್ಲ ಎಂಬ ನಿಟ್ಟಿನಿಂದ ರಾಜಕೀಯ ತ್ಯಜಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.