ನವದೆಹಲಿ, ಮಾ 02(DaijiworldNews/SK): ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿದ ಬೆನ್ನಲ್ಲೇ ಇದೀಗ ದೆಹಲಿಯಲ್ಲಿ ಕೂಡ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಮುಖ ಮಾರುಕಟ್ಟೆಗಳು ಸೇರಿದಂತೆ, ಜನನಿಬಿಡ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ
ಇನ್ನು ಯಾವುದೇ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.