ಹಾಸನ,ಏ29(DaijiworldNews/AZM): ಮಾಜಿ ಪ್ರಧಾನಿ ದೇವೇಗೌಡರು, ಮೈತ್ರಿ ಅಭ್ಯರ್ಥಿ ಪ್ರಜ್ವಲ್, ಸಚಿವ ರೇವಣ್ಣ ಮತದಾನ ಮಾಡಿದ್ದ ಕ್ಷೇತ್ರದ ಮೂವರು ಸಿಬ್ಬಂದಿಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು ಅಮಾನತುಗೊಳಿಸಿದ್ದಾರೆ.
ಏಪ್ರಿಲ್ 18 ರಂದು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಡುವಲ ಹಿಪ್ಪೆ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮೈತ್ರಿ ಅಭ್ಯರ್ಥಿ ಪ್ರಜ್ವಲ್, ಸಚಿವ ರೇವಣ್ಣ ಮತದಾನ ಮಾಡಿದ ಬಳಿಕ ಯುವಕರು ಅಕ್ರಮ ಮತದಾನ ಮಾಡಿದ್ದರು ಎಂದು ಆರೋಪಿಸಲಾಗಿತ್ತು
ಈ ಬಗ್ಗೆ ಬಿಜೆಪಿ ಬೂತ್ ಏಜೆಂಟ್ ರಾಜು ಹಾಗೂ ಮಾಯಣ್ಣ ಅವರು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿಯವರಿಗೆ ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ತನಿಖೆ ನಡೆಸಿದ ಚುನಾವಣಾ ಆಯೋಗ ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ಮಾಡಿದ್ದರು. ಈ ವೇಳೆ ಅಕ್ರಮ ಮತದಾನ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಅದೇಶ ಹೊರಡಿಸಿದ್ದಾರೆ.