ಮಂಡ್ಯ,ಮಾ 07 (DaijiworldNews/AK): ಬಿಜೆಪಿ ಕಾರ್ಯಕರ್ತನಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರ, ಬಿಜೆಪಿ ಕಾರ್ಯಕರ್ತ ಹಾಗೂ ಡಣಾಯಕನಪುರ ನಿವಾಸಿ ಆರೋಪಿ ರವಿ ಎಂಬಾತನಿಗೆ ಮಂಡ್ಯ ಪಿಸಿಜೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮಾ.05ಕ್ಕೆ ಮಂಡ್ಯದ ಪಶ್ಚಿಮ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆತನನ್ನು ಕೋರ್ಟ್ಗೆ ಹಾಜರುಪಡಿಸಿ 2 ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.
ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅದರಂತೆ ವಿಚಾರಣೆ ನಡೆಸಿದ ಮಂಡ್ಯ ನ್ಯಾಯಾಲಯ, ಇದೀಗ ಬಿಜೆಪಿ ಕಾರ್ಯಕರ್ತ ರವಿಗೆ ಜಾಮೀನು ಮಂಜೂರು ನೀಡಿದೆ.
2022ರಲ್ಲಿ ಪಾಕ್ ವಿದೇಶಾಂಗ ಸಚಿವ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಅದರಂತೆ ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಗೊಂದಲಕ್ಕೀಡಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು.