ಬೆಂಗಳೂರು,ಮಾ 07 (DaijiworldNews/AK): ರಾಜ್ಯ ಪಠ್ಯ ಕ್ರಮದ 5, 8, 9,11 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.
ಇದೇ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠದ 5,8,9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ಹೀಗಾಗಿ ನಿಗದಿಯಂತೆ ಸೋಮವಾರದಿಂದ 5, 8, 9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ನಡೆಯಲಿವೆ. ಈ ಕುರಿತು ಎಲ್ಲಾ ಗೊಂದಲಕ್ಕೆ ಕೋರ್ಟ್ ತೆರೆ ಎಳೆದಿದ್ದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತ್ತು.