ಬೆಂಗಳೂರು, ಮಾ08 (DaijiworldNews/ AK):ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಎಲೆಕ್ಟ್ರಿಕ್ ಬೈಕ್, ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆ ರದ್ದುಗೊಳಿಸಿದ ಹಿನ್ನಲೆ ಓಲಾ, ಉಬರ್, ರ್ಯಾಪಿಡೋಗಳಿಗೆ ಹೊಡೆತ ಬೀಳಲಿದೆ. 2021 ರಲ್ಲಿ ಸಾರ್ವಜನಿಕ ಸಾರಿಗೆಗಾಗಿ ಹಾಗೂ ಸ್ವಯಂ ಉದ್ಯೋಗಾವಕಾಶ ಕೊಡುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ ಜಾರಿ ಮಾಡಲಾಗಿತ್ತು.
ಹೀಗಾಗಿ ಜನರಿಗೆ ಓಲಾ, ಉಬರ್ ಸೇರಿದಂತೆ ರ್ಯಾಪಿಡೋದಿಂದ ಬೈಕ್ ಸೇವೆ ನೀಡಲಾಗುತ್ತಿತ್ತು. ಆದರೆ ಇದೀಗ ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದ್ವಿಚಕ್ರ ವಾಹನ ಸಾರಿಗೆ ಸೇವೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಅಲ್ಲದೇ ಮಹಿಳೆಯರಿಗೂ ಸುರಕ್ಷತೆಯ ದೃಷ್ಟಿಯಿಂದ ಈ ಸೇವೆಯನ್ನು ರದ್ದು ಮಾಡಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.