ಹುಬ್ಬಳ್ಳಿ,ಮಾ08 (DaijiworldNews/ AK):ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಕುರಿತು ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಿದ್ದಾರೆ. ಶೀಘ್ರದಲ್ಲಿ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಊಹಾಪೋಹಗಳಿಗೆ ಪ್ರತಿಕ್ರಿಯಿಸಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,. ಪಾಕ್ ಪರ ಘೋಷಣೆ ಕೂಗಿದ ವ್ಯಕ್ತಿ ಕಾಂಗ್ರೆಸ್ ಗೆ ಬಹಳ ಹತ್ತಿರದವನಾಗಿದ್ದಾನೆ. ರಾಜ್ಯಸಭಾ ಸದಸ್ಯ ಸಯ್ಯದ ನಾಸೀರ ಹುಸೇನ ವೈಯಕ್ತಿಕವಾಗಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಅವರ ಹಿಂಬಾಲಿಕರು ಪಾಕ್ ಪರ ಘೋಷಣೆ ಕೂಗಿದರೂ ಸುಮ್ಮನಿರುವುದು ಪರೋಕ್ಷವಾಗಿ ಸಹಕಾರ ನೀಡಿದ್ದಾರೆ ಎಂಬುವುದು ಸ್ಪಷ್ಟವಾಗುತ್ತದೆ. ಕ್ಷಮೆ ಕೇಳುವವರೆಗೂ ಪ್ರಮಾಣ ವಚನ ನೀಡಬಾರದು ಎಂದರು.
ರಾಮಶ್ವೇ ರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಕಾರಣ ಕಾಂಗ್ರೆಸ್ ನ ಬೇಜಾವಬ್ದಾರಿ ಆಡಳಿತವಾಗಿದೆ. ಎನ್ ಐಎ ತನಿಖೆ ನೀಡಿದ್ದು, ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂದರು.