ಬೆಂಗಳೂರು, ಮಾ 09 (DaijiworldNews/ AK): ಇಂಡಿಯಾ ಮೈತ್ರಿಕೂಟವು ಜಾತ್ಯತೀತತೆಯನ್ನು ಹಾಸ್ಯ ಮಾಡಿದ ಗುಂಪಾಗಿದೆ ಎಂದು ಜೆಡಿಎಸ್ ವರಿಷ್ಠ ಮತ್ತು
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಶನಿವಾರ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದ ಅವಧಿಯಲ್ಲಿ ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರೈಲ್ವೆ ಸಚಿವರಾಗಿರಿಲಿಲ್ಲವೇ? ಅದೇ ರೀತಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತಂದೆ ಮತ್ತು ಮಾಜಿ ಸಿಎಂ ಎಂ.ಕರುಣಾನಿಧಿ ಅವರು ಆರು ವರ್ಷಗಳ ಕಾಲ ಬಿಜೆಪಿಯ ಮೈತ್ರಿ ಕೂಟದಲ್ಲಿದ್ದರು. ಅವರ ಅಳಿಯ ಅಂದಿನ ಕೇಂದ್ರ ಸರ್ಕಾರದಲ್ಲಿಸಚಿವರಾಗಿದ್ದರು.ಈಗ ಟಿಎಂಸಿ ಮತ್ತು ಡಿಎಂಕೆ ಇಂಡಿಯಾ ಮೈತ್ರಿಕೂಟದ ಭಾಗವಾಗಿಲ್ಲವೇ ಎಂದು ಹೇಳಿ ನಾವು ಹಲವಾರು ನಿದರ್ಶನಗಳನ್ನು ಉಲ್ಲೇ ಖಿಸಬಹುದು. ಈ ದೇಶದಲ್ಲಿ ಜಾತ್ಯತೀತತೆ ಎಂದು ಕರೆಯಲ್ಪಡುವ, ಯಾರಾದರೂಅದರ ಬಗ್ಗೆ ಮಾತನಾಡಿದರೆ, ಜನರು ಅದನ್ನು ತಮಾಷೆ ಎಂದು ಹೇಳುತ್ತಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರುಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಕೈಜೋಡಿಸಿದ್ದಾರೆ. ಈ ಬೆಳವಣಿಗೆಗಳು ಜಾತ್ಯತೀತತೆಯ
ನಿಜವಾದ ಅರ್ಥಕ್ಕೆ ಸರಿಹೊಂದುವುದಿಲ್ಲ ಎಂದು ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಪಕ್ಷ ಕೋಮುವಾದಿ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂಬ ಕಾಂಗ್ರೆಸ್ನ ಆರೋಪದ ಕುರಿತು ಕಿಡಿಕಾರಿ, ಹಳೆಯ ಪಕ್ಷ ಎಷ್ಟು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಮಾತ್ರ ಎಂದು ವ್ಯಂಗ್ಯವಾಡಿದರು.
ಬಿಜೆಪಿಯೊಂದಿಗೆ ಸೀಟು ಹಂಚಿಕೆ ಕುರಿತು ಪ್ರತಿಕ್ರಿಯಿಸಿ ನಾಳೆ ಏನಾಗಲಿದೆ ಎಂದು ನಾನು ಊಹಿಸಲು ಸಾಧ್ಯವಿಲ್ಲ,ಕುಮಾರಸ್ವಾಮಿ ಪಕ್ಷದ ಪ್ರಶ್ನಾತೀತ ನಾಯಕ. ಅವರು ನಿರ್ಧರಿಸಬೇಕು. ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಎಲ್ಲದರ ಬಗ್ಗೆ ಚರ್ಚಿಸುತ್ತಾರೆ ಮತ್ತು ಸರಿಯಾದ ತಿಳುವಳಿಕೆಯೊಂದಿಗೆ ಬರುತ್ತಾರೆ ”ಎಂದರು.