ನವದೆಹಲಿ, ಮಾ 12(DaijiworldNews/AA): 5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿತ್ತು. ಇದೀಗ ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ರೂಪ್ಸ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಬೋರ್ಡ್ ಪರೀಕ್ಷೆ ನಡೆಸದಂತೆ ಆದೇಶಿಸಿದೆ.
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈ ಆದೇಶವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದು ಗೊಳಿಸಿತ್ತು. ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಬಳಿಕ ವಿಭಾಗೀಯ ಪೀಠ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ಬೋರ್ಡ್ ಪರೀಕ್ಷೆ ನಡೆಸಲು ತಿಳಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಇದೀಗ ಸುಪ್ರೀಂ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಆದೇಶಕ್ಕೆ ತಡೆ ನೀಡಿದೆ. ಮೇಲ್ಮನವಿ ಅರ್ಜಿಯ ಸಂಪೂರ್ಣ ವಾದ ಮಂಡಿಸಿ ತೀರ್ಪು ಪ್ರಕಟವಾಗುವವರೆಗೂ ಬೋರ್ಡ್ ಎಕ್ಸಾಂ ನಡೆಸಬಾರದೆಂದು ಸುಪ್ರೀಂ ಆದೇಶ ಹೊರಡಿಸಿದೆ.