ಬೆಂಗಳೂರು, ಮಾ 13(DaijiworldNews/AA): ಕೆಪಿಸಿಸಿಯ ರಾಜ್ಯ ವಕ್ತಾರರಾಗಿ ಎಂ.ಜಿ.ಹೆಗಡೆ ಅವರು ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಎಂ.ಜಿ.ಹೆಗಡೆ ಅವರನ್ನು ರಾಜ್ಯ ವಕ್ತಾರರನ್ನಾಗಿ ನೇಮಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಜೊತೆಗೆ ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಸೂಚನೆ ಹೊರಡಿಸಿದ್ದಾರೆ.
ಎಂ.ಜಿ.ಹೆಗಡೆ ಅವರು ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೂ ಹೆಚ್ಚಾಗಿ ಅವರು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.