ನವದೆಹಲಿ, ಮಾ 14(DaijiworldNews/AK) : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಕಡಿತಗೊಳಿಸಿದೆ. ಪರಿಷ್ಕೃತ ದರ ಮಾರ್ಚ್ 15 ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಗುರುವಾರ ಪ್ರಕಟಿಸಿದೆ.
ಬೆಲೆ ಇಳಿಕೆಯಿಂದ 58 ಲಕ್ಷ ಸರಕು ವಾಹನ, 6 ಕೋಟಿ ಕಾರುಗಳು ಮತ್ತು 27 ಕೋಟಿ ದ್ವಿಚಕ್ರ ವಾಹನಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.
ಸಚಿವಾಲಯವು ಹಂಚಿಕೊಂಡಿರುವ ಗ್ರಾಫ್ಗಳ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್ಗೆ 94.72 ರೂ ಆಗಲಿದೆ, ಪ್ರಸ್ತುತ ಲೀಟರ್ಗೆ 96.72 ರೂ, ಮತ್ತು ಡೀಸೆಲ್ ಬೆಲೆ 89.72 ರೂ ವಿರುದ್ಧ 87.62 ರೂ.
ಕೇಂದ್ರ ಸರ್ಕಾರ ಗೃಹ ಬಳಕೆಯ ಎಲ್ಪಿಜಿ ದರವನ್ನು ಇಳಿಕೆ ಮಾಡಿತ್ತು.