ನವದೆಹಲಿ, ಮಾ 15(DaijiworldNews/MS): ಚುನಾವಣಾ ಬಾಂಡ್ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂ ಕೋರ್ಟ್ ಮತ್ತೊಂದು ನಿರ್ದೇಶನ ಜಾರಿ ಮಾಡಿದ್ದು ರಾಜಕೀಯ ಪಕ್ಷಗಳು ಮತ್ತು ದಾನಿಗಳ ನಡುವಿನ ಸಂಬಂಧವನ್ನು ಬಹಿರಂಗಪಡಿಸುವ ಚುನಾವಣಾ ಬಾಂಡ್ ಡೇಟಾವನ್ನು ಪ್ರಕಟಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಸಂಪೂರ್ಣ ಡೇಟಾ ಬಹಿರಂಗಪಡಿಸಿದ ಎಸ್ಬಿಐಗೆ ಸುಪ್ರಿಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು ಖರೀದಿ ದಿನಾಂಕ, ಖರೀದಿದಾರರ ಹೆಸರು ಮತ್ತು ಮುಖಬೆಲೆ ಸೇರಿದಂತೆ ಚುನಾವಣಾ ಬಾಂಡ್ಗಳ ಎಲ್ಲಾ ವಿವರಗಳನ್ನು ಲಭ್ಯವಾಗುವಂತೆ ಚುನಾವಣಾ ಬಾಂಡ್ ಆಲ್ಫಾನ್ಯೂಮರಿಕ್ ಸಂಖ್ಯೆಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಎಸ್ಬಿಐಗೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ, ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿದ ಸಲ್ಲಿಕೆಗಳನ್ನು ಗಮನಿಸಿತು. ಚುನಾವಣಾ ಬಾಂಡ್ಗಳ ಆಲ್ಫಾ-ಸಂಖ್ಯೆಯ ಸಂಖ್ಯೆಗಳನ್ನು ಎಸ್ಬಿಐ ಬಹಿರಂಗಪಡಿಸಿಲ್ಲ ಎಂದು ಹೇಳಿ ಬ್ಯಾಂಕ್ಗೆ ನೋಟಿಸ್ ಜಾರಿ ಮಾಡಿ ಮಾರ್ಚ್ 18ಕ್ಕೆ ವಿಚಾರಣೆಗೆ ಮುಂದೂಡಿದೆ.