ದೆಹಲಿ, ಮಾ 15(DaijiworldNews/AA): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾದ ಇಡಿ ಸಮನ್ಸ್ಗೆ ತಡೆ ನೀಡಲು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಸೆಷನ್ಸ್ ಕೋರ್ಟ್ ಇಂದು ನಿರಾಕರಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಕೇಶ್ ಸೈಲ್ ಅವರು ಪ್ರಕರಣದಲ್ಲಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ವಿನಾಯಿತಿಗಾಗಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕ ಮಾಡುವಂತೆ ಕೇಜ್ರಿವಾಲ್ ಅವರಿಗೆ ಸೂಚನೆ ನೀಡಿದ್ದಾರೆ. ಇನ್ನು ಕೇಜ್ರಿವಾಲ್ ಅವರಿಗೆ ಮಾ. 16 ರಂದು ತನ್ನ ಮುಂದೆ ಹಾಜರಾಗಲು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಆದೇಶ ನೀಡಿದ್ದರು. ಈ ಆದೇಶದ ವಿರುದ್ಧ ಕೇಜ್ರಿವಾಲ್ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಕೇಜ್ರಿವಾಲ್ ಅವರು ತನಿಖಾ ಸಂಸ್ಥೆ ನೀಡಿದ ಎಂಟು ಸಮನ್ಸ್ಗಳಿಗೆ ಗೈರಾಗಿದ್ದಾರೆ. ಇದೀಗ ಕೇಜ್ರಿವಾಲ್ ಅವರ ವಿಚಾರಣೆ ಕೋರಿ ಇಡಿ ಮ್ಯಾಜಿಸ್ಟ್ರೀಯಲ್ ಕೋರ್ಟ್ ಗೆ 2 ದೂರುಗಳನ್ನು ಸಲ್ಲಿಸಿದೆ.