ನವದೆಹಲಿ, ಮಾ 16(DaijiworldNews/ AK): 2024ರ ಲೋಕಸಭಾ ಚುನಾವಣೆಯ 543ಕ್ಷೇತ್ರದ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ ಘೋಷಿಸಿದೆ. ದೇಶಾದ್ಯಂತ ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಎಂದು ರಾಜೀವ್ ಕುಮಾರ್ ತಿಳಿಸಿದರು.
ಏಪ್ರಿಲ್ 19ರಂದು ಮೊದಲ ಹಂತದ ಮತದಾನ. ಏಪ್ರಿಲ್ 26 ಮತ್ತು ಮೇ 7ರಂದು ಕರ್ನಾಟಕದಲ್ಲಿ ಮತದಾನ, ಮೇ 7ರಂದು ಮೂರನೇ ಹಂತ, ಮೇ 13 4ನೇ ಹಂತದ ಮತದಾನ, ಮೇ 20 5ನೇ ಹಂತ, ಮೇ 25 6ನೇ ಹಂತ, ಜೂನ್ 1 7ನೇ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಘೋಷಣೆಯಾಗಲಿದೆ.
ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಂಡಮಾನ್ ನಿಕೋಬಾರ್, ಆಂಧ್ರಪ್ರದೇಶ, ಚಂಡೀಗಢ್, ದಾದ್ರ ಹವೇಲಿ, ದೆಹಲಿ,ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಹರ್ಯಾಣ, ಕೇರಳ, ಲಕ್ಷದ್ವೀಪ, ಲಡಾಖ್, ಮಿಜೋರಾಂ, ಮೇಘಾಲಯ,ನಾಗಾಲ್ಯಾಂಡ್, ಪಾಂಡಿಚೇರಿ, ಸಿಕ್ಕಿಂ , ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ್ ನಲ್ಲಿ ಮತದಾನ ನಡೆಯಲಿದೆ.
ಕರ್ನಾಟಕ, ರಾಜಸ್ಥಾನ, ತ್ರಿಪುರಾ, ಮಣಿಪುರದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಚತ್ತೀ ಸ್ ಗಢ್, ಅಸ್ಸಾಂನಲ್ಲಿ ಮೂರು ಹಂತದಲ್ಲಿ ಮತದಾನ ನಡೆಯಲಿದೆ. ಒಡಿಶಾ, ಮಧ್ಯಪ್ರದೇಶ ಮತ್ತು ಜಾರ್ಖಂಡ್ ನಲ್ಲಿ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀ ರದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮಬಂಗಾಳದಲ್ಲಿ ಏಳನೇ ಹಂತಗಳಲ್ಲಿ ಮತದಾನ ನಡೆಯಲಿದೆ.
26 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಆಯೋಗ ದಿನಾಂಕ ಘೋಷಿಸಿದೆ. ಏಪ್ರಿಲ್ 19ರಂದು ಸಿಕ್ಕಿಂ ಉಪ ಚುನಾವಣೆ. ಮೇ 13 ಆಂಧ್ರಪ್ರದೇಶ ಉಪ ಚುನಾವಣೆ. ಏಪ್ರಿಲ್ 19 ಅರುಣಾಚಲ ಪ್ರದೇಶ ಉಪಚುನಾವಣೆ. ಮೇ 25ರಂದು ಒಡಿಶಾ ವಿಧಾನಸಭಾ ಚುನಾವಣೆ ನಡೆಯಲಿದೆ.
ದೇಶಾದ್ಯಂತ 10.5 ಲಕ್ಷ ಮತಗಟ್ಟೆಗಳ ಸ್ಥಾಪನೆಯಾಗಲಿದೆ. ದೇಶದಲ್ಲಿ ಒಟ್ಟು 97 ಕೋಟಿ ಮತದಾರರಿದ್ದಾರೆ.ಈ ಬಾರಿ 1.82 ಕೋಟಿ ಜನರು ಮೊದಲ ಬಾರಿ ಮತ ಚಲಾಯಿಸಲಿದ್ದಾರೆ.1.5 ಕೋಟಿ ಭದ್ರತಾ ಸಿಬಂದಿ, ಅಧಿಕಾರಿಗಳ ನೇಮಕ ಮಾಡಲಾಗುತ್ತದೆ. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ಬಳಕೆ ಮಾಡಲಾಗುತ್ತದೆ. ದೇಶದಲ್ಲಿ 49.7 ಕೋಟಿ ಪುರುಷ ಮತದಾರು, 47.1 ಕೋಟಿ ಮಹಿಳಾ ಮತದಾರು, 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ.12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚು ಇದೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತ ಚಲಾಯಿಸಲಿದ್ದಾರೆ.
ಮತಗಟ್ಟೆಗಳಲ್ಲಿ ಹೆಲ್ಫ್ ಡೆಸ್ಕ್, ವ್ಹೀ ಲ್ ಚೇರ್ ವ್ಯವಸ್ಥೆ.ಈ ಬಾರಿ 2.18 ಲಕ್ಷ ಶತಾಯುಷಿ ಮತದಾರರು ಮತ ಚಲಾಯಿಸಲಿದ್ದಾರೆ. ಬಾರ್ಡರ್ ಗಳಲ್ಲಿ ಡ್ರೋ ನ್ ಮೂಲಕ ಕಣ್ಗಾವಲು ನಿಯೋಜಿಸಲಾಗುತ್ತದೆ. ಮತದಾನದಂದು ಪ್ರತಿ ಜಿಲ್ಲೆಯಲ್ಲಿ ಕಂಟ್ರೋ ಲ್ ರೂಂ, ಅಕ್ರಮವಾಗಿ ಹಣ ಸಾಗಿಸಿದರೆ ಕಠಿನ ಕ್ರಮ, ಕುಕ್ಕರ್, ಮದ್ಯ, ಹಣ ಅಮೀಷ ಒಡ್ಡುವಂತಿಲ್ಲ.ಚುನಾವಣಾ ಪ್ರಚಾರದ ವೇಳೆ ಹಲವಾರು ಷರತ್ತು ವಿಧಿಸಲಾಗುವುದು. ವೈಯಕ್ತಿಕವಾಗಿ ಟೀಕೆ ಮಾಡುವಂತಿಲ್ಲ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ಅಭ್ಯರ್ಥಿಗಳು ಮತದಾರರನ್ನು ಪ್ರಚೋದಿಸುವಂತಿಲ್ಲ ಎಂದು ಆಯೋಗ ಎಚ್ಚರಿಕೆ ನೀಡಿದೆ.
ಲೋಕಸಭೆ ಚುನಾವಣೆ ಜೊತೆಗೆ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ 3 ಹಂತಗಳಲ್ಲಿ ನಡೆಯಲಿದೆ 1.8 ಕೋ ಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. 10.05 ಲಕ್ಷ ಮತಗಟ್ಟೆಗಳನ್ನು ಸಿದ್ಧಪಡಿಸಲಾಗುವುದು. ದೇ ಶದಲ್ಲಿ ಸುಮಾರು 97 ಕೋಟಿ ಮತದಾರರು ಇದ್ದಾರೆ 1.5 ಕೋ ಟಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಲೋಕಸಭೆ ಚುನಾವಣೆಯೊಂದಿಗೆ ನಾಲ್ಕು ರಾಜ್ಯಗಳ ಅಸೆಂಬ್ಲಿ ಚುನಾವಣೆ ನಡೆಯಲಿದೆ. ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 12 ರಾಜ್ಯಗಳಲ್ಲಿ ಪುರುಷ ಮತದಾರರರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ಜಾಸ್ತಿಇದೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಒಟ್ಟು 55 ಲಕ್ಷ ಇವಿಎಂ ಗಳ ಬಳಕೆ ಮಾಡಲಾಗುತ್ತದೆ. 1.8 ಕೋ ಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ.
49.7 ಕೋ ಟಿ ಪುರುಷ ಮತದಾರರು, 47.1 ಕೋ ಟಿ ಮಹಿಳಾ ಮತದಾರರು ಇದ್ದಾರೆ. ಸಮಾರು 19.74 ಕೋಟಿ ಯುವ ಮತರರು ಇದ್ದಾರೆ ಎಂದು ತಿಳಿಸಿದರು.
ಅಭ್ಯರ್ಥಿ ಗಳು ತಮ್ಮ ಮೇ ಲಿನ ಕ್ರಿಮಿನಲ್ ಕೇ ಸ್ಗಳನ್ನು ಆಯೋಗಕ್ಕೆ ನೀಡುವುದು ಕಡ್ಡಾಯ. 80 ಮೇ ಲಿನ ಮತದಾರರು ಮತಗಟ್ಟೆಗೆ ಕರೆತರಲು ವಾಹನ ವ್ಯವಸ್ಥೆ ಮತಗಟ್ಟೆಗಳಲ್ಲಿ ಮಾಹಿತಿ ಕೇಂ ದ್ರ, ಗಾಲಿ ಕುರ್ಚಿ ಕುಡಿಯುವ ನೀ ರು ವ್ಯವಸ್ಥೆ. ಶೇ 40ಕ್ಕಿಂ ತ ಹೆಚ್ಚಿನ ಅಂ ಗವೈ ಕಲ್ಯತೆ ಇರುವವರಿಗೆ
ಮನೆಯಿಂದಲೇ ಮತದಾನ ಅವಕಾಶ ವಯೋ ವೃದ್ಧ ಮತದಾರರನ್ನು ಮತಗಟ್ಟೆಗೆ ಕರೆತರಲು ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು