ನವದೆಹಲಿ, ಮಾ 16(DaijiworldNews/ AK): ಚುನಾವಣಾ ಆಯೋಗ ಲೋಕಸಭಾ ಚುನಾವಣೆ ಮತದಾನ ದಿನಾಂಕ ಘೋಷಿಸಿದ ಬೆನ್ನಲ್ಲೇ ಬಿಜೆಪಿ-ಎನ್ ಡಿಎ
ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಎಕ್ಸ್ನಲ್ಲಿ ಫೋಸ್ಟ್ ಮಾಡಿದ ಅವರು, ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಇದು ! ಚುನಾವಣ ಆಯೋಗ 2024 ರ ಲೋಕಸಭೆ ಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ.
ನಾವು, ಬಿಜೆಪಿ-ಎನ್ಡಿಎ ಚುನಾವಣೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಉತ್ತಮ ಆಡಳಿತ ಮತ್ತು ಕ್ಷೇತ್ರಗಳಾದ್ಯಂ ತ ಸೇವೆ ಸಲ್ಲಿಸಿರುವ ನಮ್ಮ ಟ್ರ್ಯಾ ಕ್ ರೆಕಾರ್ಡ್ ಆಧಾರದ ಮೇಲೆ ನಾವು ಜನರ ಬಳಿಗೆ ಹೋಗುತ್ತಿದ್ದೇವೆ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.