ನವದೆಹಲಿ, 17(DaijiworldNews/ AK): ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದ ಪೂರ್ಣ ವಿವರಗಳನ್ನು ಇದೇ ತಿಂಗಳುಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇ ಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ (ಎಸ್ಬಿಐ)ಗೆ ಸುಪ್ರೀಂ ಕೋ ರ್ಟ್ ಸೂಚಿಸಿದೆ.
ಬಾಂಡ್ಗಳಿಗೆ ಸಂಬಂಧಿಸಿದ ವಿವರವನ್ನು ಬಿಡುಗಡೆಗೊಳಿಸಬೇಕೆಂಬ ಅಗತ್ಯತೆಯಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ . ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಹೇಳಿದೆ.
ಯೂನಿಕ್ ಬಾಂಡ್ ನಂಬರ್ಗಳು ಒಳಗೊಂಡಂತೆ ಎಲ್ಲ ವಿವರಗಳನ್ನು ಎಸ್ಬಿಐ ಅಧ್ಯಕ್ಷ ಮಾರ್ಚ್ 21 ಸಂಜೆ 5ರೊಳಗೆ ಅಫಿಡಿವಿಟ್ ಮೂಲಕ ಕೋರ್ಟ್ಗೆ ಸಲ್ಲಿಸಬೇಕು ಎಂದು ತಿಳಿಸಿದೆ.