ಬೆಂಗಳೂರು, ಮಾ 19(DaijiworldNews/AK): ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಯಾವ ಸಮಸ್ಯೆಯೂ ಇಲ್ಲ. ಜೆಡಿಎಸ್ ಮೂರು ಮತ್ತು ಬಿಜೆಪಿಯ 25 ಅಭ್ಯರ್ಥಿಗಳ ಗೆಲುವಿಗೆ ನಾವು ಒಗ್ಗಟ್ಟಿನಿಂದ ಹೋ ರಾಡುತ್ತೇ ವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರನ್ನು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹೃದಯದ ಚಿಕಿತ್ಸೆಗಾಗಿ ಚೆನ್ನೈ ಗೆ ತೆರಳುತ್ತಿದ್ದೇನೆ. ಮೈತ್ರಿ ಧರ್ಮವನ್ನು ಪಾಲಿಸಿಕೊಂಡು ಒಟ್ಟಾಗಿ ಚುನಾವಣಾ ಪ್ರಚಾರ ನಡೆಸುವಂತೆ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರಿಗೆ ಸೋಮವಾರ ಕರೆ ನೀಡಿದ್ದೆ. ನಮ್ಮ ಮಧ್ಯೆ ಯಾವ ಗೊಂದಲವೂ ಇಲ್ಲ ಎಂದರು ತಿಳಿಸಿದರು.
ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಕೋಲಾರ ಅಭ್ಯರ್ಥಿಗೆ ಸಂಬಂಧಿಸಿದ ವಿಷಯ ಶೀಘ್ರ ಇತ್ಯರ್ಥವಾಗಲಿದೆ. ಚಿಕಿತ್ಸೆ ಮುಗಿಸಿ ಬಂದ ಬಳಿಕ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು ಎಂದು ಹೇಳಿದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಬಗ್ಗೆ ಈಗ ಅನುಕಂಪದ ಮಾತನಾಡುತ್ತಿದ್ದಾರೆ.ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಕಾರಣಕ್ಕೆ ಜೆಡಿಎಸ್ ಮುಗಿದು ಹೋಯಿತು ಎಂದು ಹೇಳುತ್ತಿದ್ದಾರೆ. ಇವರ ಅನುಕಂಪ ನನಗೆ ಬೇಕಿಲ್ಲ ಎಂದರು.
2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ಮೈತ್ರಿ ಸರ್ಕಾರ ರಚಿಸಿದ ಕಾಂಗ್ರೆಸ್, ಅದೇ ಅವಕಾಶ ಬಳಸಿಕೊಂಡು ಜೆಡಿಎಸ್ ಪಕ್ಷವನ್ನು ದುರ್ಬ ಲಗೊಳಿಸುವ ಪ್ರಯತ್ನ ಆರಂಭಿಸಿತ್ತು. ನಮ್ಮ ಮುಖಂಡರು, ಕಾರ್ಯಕರ್ತರಿಗೆ ಆಮಿಷ ಒಡ್ಡಿ ತನ್ನತ್ತ ಸೆಳೆಯುವ ಕೆಲಸ ಮಾಡಿತ್ತು.ಜೆಡಿಎಸ್ ಅನ್ನು ದುರ್ಬಲಗೊಳಿಸುವ ಕಾಂಗ್ರೆಸ್ನ ಪ್ರಯತ್ನವನ್ನು ತಡೆಯುವುದಕ್ಕಾಗಿಯೇ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.