ಬೆಂಗಳೂರು, ಮಾ 24(DaijiworldNews/AA): 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ಯು ನಾಳೆಯಿಂದ ಪ್ರಾರಂಭವಾಗಲಿದ್ದು, ಈ ಪರೀಕ್ಷೆಯು ಏಪ್ರಿಲ್ 6ರವರೆಗೆ ನಡೆಯಲಿದೆ. ರಾಜ್ಯಾದ್ಯಂತ 2,750 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು, ಈ ಬಾರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಪರೀಕ್ಷೆಗೆ ನೋಂದಣಿ ಮಾಡಿಕೊಂಡ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 41,375 ಪುನರಾವರ್ತಿರ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನು ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರು ಮತ್ತು 4,28,058 ಬಾಲಕಿಯರಾಗಿದ್ದಾರೆ. ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯುತ್ತಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ ಒದಗಿಸಲು ತಯಾರಿ ಮಾಡಿಕೊಳ್ಳಲಾಗಿದೆ.