ಉಡುಪಿ, ಮಾ 24(DaijiworldNews/AA): ಸಿಎಂ ಸಿದ್ದರಾಮಯ್ಯ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಶಾಸಕರನ್ನು ಸೆಳೆಯಲು ಬಿಜೆಪಿ 50 ಕೋಟಿ ರೂ. ಆಫರ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಹಾಗೂ ಕೋಟಾ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಇಂಗ್ಲಿಷ್ ಬರಲ್ಲ ಎಂಬ ಜಯಪ್ರಕಾಶ್ ಹೆಗ್ಡೆ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಲಾಗಿದೆ. ಈ ಎರಡು ವಿಚಾರವಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.