ಹುಬ್ಬಳ್ಳಿ, ಮಾ 24(DaijiworldNews/AK):ಬೆಳಗಾವಿ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟುಗಳೂ ಇಲ್ಲ. ಇಂದು ಇಲ್ಲವೇ ನಾಳೆ ಟಿಕೆಟ್ಘೋಷಣೆಯಾಗಲಿದೆ. ನನಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ನಾನಿದ್ದೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಬೆಳಗಾವಿ ಕ್ಷೇತ್ರದ ಹಲವು ನಾಯಕರು ನನಗೆ ಈಗಾಗಲೇ ಆಹ್ವಾನ ನೀಡುತ್ತಿದ್ದಾರೆ. ನಾನು ಸಹ ಅವರ ಜತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಂಗಾಲೇಶ್ವರ ಶ್ರೀಗಳು ಸ್ಪರ್ಧೆ ಮಾಡುವುದು ನನಗೆ ಗೊತ್ತಿಲ್ಲ ಎಂದರು.
ಕಾಂಗ್ರೆಸ್ ನ ಗ್ಯಾರಂಟಿಗಳನ್ನು ನೋಡಿ ಜನ ಮತ ಹಾಕಲ್ಲ. ಮೋದಿಯವರ ಕಾರ್ಯಗಳನ್ನು ನೋಡಿ ಲೋಕಸಭಾ ಚುನಾವಣೆಯಲ್ಲಿ ಜನರು ಅವರಿಗೆ ಬೆಂಬಲ ನೀಡುತ್ತಾರೆ. ಮಹಿಳೆಯರಿಗೆ ನ್ಯಾಯ ಒದಗಿಸಿದ್ದು ನಮ್ಮ ಪಕ್ಷ. ಮಹಿಳಾ ಮೀಸಲಾತಿ ಜಾರಿಗೆ ತರುತ್ತಿರುವುದು ಮೋದಿ ಸರ್ಕಾರ ಎಂದರು.