ನವದೆಹಲಿ, ಮಾ 25(DaijiworldNews/AK): ಶೀಘ್ರವಾಗಿ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನವಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ತವರು ಭಾರತದೊಂದಿಗೆ ವಿಲೀನದ ಬೇಡಿಕೆಯನ್ನು ಎತ್ತುತ್ತಿದ್ದಾರೆ. ಪಿಒಕೆ ಜನರು ಭಾರತದೊಂದಿಗೆ ವಿಲೀನಗೊಳ್ಳುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಇತ್ತೀಚಿನ ಟೀಕೆಗಳ ಬಗ್ಗೆ ಮಾತನಾಡಿ, ಅವರು ಎಂದಾದರೂ ಕಾಶ್ಮೀರವನ್ನು ತೆಗೆದುಕೊಳ್ಳಬಹುದೇ? ಅವರು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಚಿಂತಿಸಬೇಕು. ಸುಮಾರು ಒಂದೂವರೆ ವರ್ಷಗಳ ಹಿಂದೆಯೇ, ನಾವು ದಾಳಿ ಮಾಡಿ ಆಕ್ರಮಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದೆ. ಅಲ್ಲಿ ಪರಿಸ್ಥಿತಿ ಬದಲಾಗುತ್ತಿದೆ. ಪಿಒಕೆ ಜನರೇ ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
. ಭಾರತವು ವಿಶ್ವದ ಯಾವುದೇ ದೇಶದ ಮೇಲೆ ದಾಳಿ ಮಾಡುವ ಗುಣವನ್ನು ಹೊಂದಿಲ್ಲ. ಆದರೆ ಪಿಒಕೆ ನಮ್ಮದು. ಪಿಒಕೆ ಸ್ವತಃ ಭಾರತದೊಂದಿಗೆ ವಿಲೀನಗೊಳ್ಳುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.