ನವದೆಹಲಿ,ಏ 02(DaijiworldNews/AK): ಕಾಂಗ್ರೆಸ್ಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ದೇಶವನ್ನು ಎರಡು ಭಾಗ ಮಾಡುವ ಬಗ್ಗೆ ಮಾತನಾಡಿದ ಕರ್ನಾಟಕದ ನಾಯಕನಿಗೆ ಟಿಕೆಟ್ ನೀಡಿದೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿಕೆ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರಾಖಂಡದ ರುದ್ರಪುರದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇವಲ 10 ವರ್ಷ ಅಧಿಕಾರದಿಂದ ದೂರ ಉಳಿದಿರುವ ಕಾಂಗ್ರೆಸ್ ಭಾರತದಲ್ಲಿ ಬೆಂಕಿ ಹೊತ್ತಿಸುವ ಬಗ್ಗೆ ಮಾತನಾಡಲು ಪ್ರಾರಂಭಿಸಿದೆ. ಅಂತಹವರಿಗೆ ನೀವು ಶಿಕ್ಷೆ ನೀಡುತ್ತೀರಾ? ಎಂದು ಜನರನ್ನು ಪ್ರಶ್ನಿಸಿದರು.ಈ ಬಾರಿಯ ಚುನಾವಣೆಯಲ್ಲಿ ಅವರನ್ನು ಕ್ಷೇತ್ರದಲ್ಲಿ ಬಿಡಬೇಡಿ ಎಂದು ಕರೆ ನೀಡಿದ್ದಾರೆ.
ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವವರಿಗೆ ಶಿಕ್ಷೆಯಾಗಬೇಕಲ್ಲವೇ? ಅವರನ್ನು ಶಿಕ್ಷಿಸುವ ಬದಲು ಕಾಂಗ್ರೆಸ್ ಚುನಾವಣಾ ಟಿಕೆಟ್ ನೀಡಿದೆ ಎಂದು ಪರೋಕ್ಷವಾಗಿ ಡಿ.ಕೆ ಸುರೇಶ್ ಹೆಸರನ್ನು ಬಳಸದೇ ವಾಗ್ದಾಳಿ ನಡೆಸಿದ್ದಾರೆ.
ನಾವು ಮಹಿಳೆಯರ ಸಬಲೀಕರಣಕ್ಕಾಗಿ `ನಮೋ ಡ್ರೋನ್ ದೀದಿ’ ಯೋಜನೆಯನ್ನು ಪ್ರಾರಂಭಿಸಿದ್ದೇವೆ. ಈ ಯೋಜನೆ ಅಡಿಯಲ್ಲಿ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಡ್ರೋನ್ ಪೈಲಟ್ಗಳಾಗಲು ಸಹಾಯ ಮಾಡಲು ಲಕ್ಷಾಂತರ ರೂಪಾಯಿ ಮೌಲ್ಯದ ಡ್ರೋನ್ಗಳನ್ನು ನೀಡಲಾಗುತ್ತಿದೆ. ಉತ್ತರಾಖಂಡ ಅಭಿವೃದ್ದಿಗೆ ಕೇಂದ್ರ ಬದ್ಧವಾಗಿದ್ದು, ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ.