ನವದೆಹಲಿ, ಏ 05 (DaijiworldNews/AK): ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ದೇಶಾದ್ಯಂತ ಜಾತಿಗಣತಿ ಮಾಡುವುದಾಗಿ ಭರವಸೆ ನೀಡಿದೆ.
ದೆಹಲಿಯ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವೇಣುಗೋಪಾಲ್, ಚಿದಂಬರಂ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.ಪ್ರಣಾಳಿಕೆಗೆ ನ್ಯಾಯ ಪತ್ರ ಎಂದು ಹೆಸರನ್ನು ಇಡಲಾಗಿದೆ.
ಪ್ರಣಾಳಿಕೆಯಲ್ಲಿರುವ ಅಂಶಗಳಾದ ದೇಶಾದ್ಯಂತ ಜಾತಿ ಗಣತಿ, ಹಿರಿಯ ನಾಗರಿಕರಿಗೆ ಸಾರ್ವಜನಿಕ ಸಾರಿಗೆ (ರೈಲು ಮತ್ತು ರಸ್ತೆ) ಯಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ ಮರುಜಾರಿ ಮಾಡುವುದು. ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು/ಆಸ್ಪತ್ರೆ. ಆಶಾ,ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಕೇಂದ್ರದ ಪಾಲು ದ್ವಿಗುಣ. 2500ಕ್ಕಿಂತ ಜನಸಂಖ್ಯೆ ಜಾಸ್ತಿ ಇರುವ ಹಳ್ಳಿಗಳಲ್ಲಿ ಎರಡನೇ ಆಶಾ ಕಾರ್ಯಕರ್ತೆ ನೇಮಕ. 12ನೇ ತರಗತಿಯವರೆಗೆ ಮಧ್ಯಾಹ್ನದ ಬಿಸಿಯೂಟ, ರಾಜ್ಯಗಳ ಜೊತೆ ಚರ್ಚಿಸಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಬದಲಾವಣೆ. ಪಬ್ಲಿಕ್ ಶಾಲೆಗಳಲ್ಲಿ ಸ್ಪೆಷಲ್ ಫೀಸ್ ಗಳು ರದ್ದು, ಶಿಕ್ಷಕರನ್ನು ಶಿಕ್ಷಣೇತರ ಚಟುವಟಿಕೆಗಳಿಗೆ ಬಳಸಲ್ಲ, ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳ ಸಂಖ್ಯೆ ರಾಜ್ಯಗಳ ಜೊತೆ ಚರ್ಚಿಸಿ ಹೆಚ್ಚಳ, ಪ್ರತಿ ತಾಲೂಕಿನಲ್ಲಿ ಸರ್ಕಾರಿ ಕಮ್ಯುನಿಟಿ ಕಾಲೇಜು (ಹಾಸ್ಪಿಟಾಲಿಟಿ, ಪ್ರವಾಸೋದ್ಯಮ, ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್ ಇತ್ಯಾದಿ ಕಲಿಕೆ).
9 ರಿಂದ 12ನೇ ತರಗತಿಯ ಮಕ್ಕಳಿಗೆ ಮೊಬೈಲ್ ಫೋನ್ (ಶಾಲೆ, ಕಾಲೇಜು ಕ್ಯಾಂಪಸ್ನಲ್ಲಿ ಉಚಿತ ಅನ್ ಲಿಮಿಟೆಡ್ ಇಂಟರ್ನೆಟ್), 21 ವರ್ಷದೊಳಗಿನ ಕ್ರೀಡಾ ಪ್ರತಿಭೆಗಳಿಗೆ ಪ್ರತಿ ತಿಂಗಳು 10 ಸಾವಿರ ರೂ.ಗಳ ಕ್ರೀಡಾ ಸ್ಕಾಲರ್ ಶಿಪ್, ಮಹಾಲಕ್ಷ್ಮಿ ಯೋಜನೆಯಡಿ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ಕುಟುಂಬದ ಹಿರಿಯ ಮಹಿಳೆಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ, ಮಹಿಳೆಯರು ಇಲ್ಲದಿದ್ದರೆ ಕುಟುಂಬದ ಅತಿ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾವಣೆ, ವಿವಿಧ ಹಂತಗಳಲ್ಲಿ ಮಹಾಲಕ್ಷ್ಮಿ ಯೋಜನೆ ಜಾರಿ.
ಬಡತನ ನಿರ್ಮೂಲನೆಗೆ ಸಹಾಯವಾಗಿದೆಯಾ ಎಂದು ಕಾಲಕಾಲಕ್ಕೆ ಯೋಜನೆಯ ಅವಲೋಕನ ಮಾಡುವುದು , ಮಹಿಳಾ ಮೀಸಲಾತಿ 2025ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲೇ ಜಾರಿ, 2025ರಿಂದ ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಜಾರಿ, ಒಂದು ದೇಶ, ಒಂದು ಚುನಾವಣೆ ತಿರಸ್ಕಾರ,ಇವಿಎಂ ಮೂಲಕವೇ ಮತದಾನ ನಡೆಯಬೇಕು. ಆದರೆ ಬ್ಯಾಲಟ್ ಪೇಪರ್ ನಲ್ಲಿ ಪಾರದರ್ಶಕತೆ. ಮತದಾರನೇ ತನ್ನ ಕೈಯಾರೆ ಇವಿಎಂ ಮತದಾನದ ಬಳಿಕ ಯಂತ್ರವು ನೀಡುವ ವೋಟರ್ ಸ್ಲಿಪ್ ವಿವಿಪ್ಯಾಟ್ ಯೂನಿಟ್ ಗೆ ಹಾಕಲು ವ್ಯವಸ್ಥೆ. ಎಲೆಕ್ಟ್ರಾನಿಕ್ ವೋಟ್ ಮತ್ತು ವಿವಿಪ್ಯಾಟ್ ಸ್ಲಿಪ್ ಟ್ಯಾಲಿ ಆಗಲೇಬೇಕು.
ಶಾಸಕ ಅಥವಾ ಸಂಸದ ಪಕ್ಷ ಬದಲಾಯಿಸಿದರೆ (ಗೆದ್ದ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋದರೆ) ಆಟೋಮ್ಯಾಟಿಕ್ ಆಗಿ ಶಾಸಕ ಅಥವಾ ಸಂಸದನ ಸ್ಥಾನ ಅನರ್ಹತೆ. ಇದಕ್ಕಾಗಿ 10ನೇ ಶೆಡ್ಯೂಲ್ಗೆ ತಿದ್ದುಪಡಿ ಎಂದು ಪ್ರಣಾಳಿಕೆಯ ಪ್ರಣಾಳಿಕೆಯ ಪ್ರಮುಖವಾಗದ ಅಂಶವಾಗಿದೆ.