ನವದೆಹಲಿ, ಏ 06 (DaijiworldNews/MS): ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಶನಿವಾರ ಇಲ್ಲಿನ ನ್ಯಾಯಾಲಯವು ಏಪ್ರಿಲ್ 18ರವರೆಗೆ ವಿಸ್ತರಿಸಿದೆ.
ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಸೋಡಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.
ಈ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿರುವ ಸಹ ಆರೋಪಿ ಸಂಜಯ್ ಸಿಂಗ್ ಸಹ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.