ನವದೆಹಲಿ, ಏ 08 (DaijiworldNews/AA): ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಎಲ್ಲ ವಿಚಾರಕ್ಕೂ ರಾಜ್ಯಗಳು ಸುಪ್ರೀಂಕೋರ್ಟ್ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದು, ಇನ್ನು 2 ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಸುಪ್ರೀಂಗೆ ಕೇಂದ್ರ ಭರವಸೆ ನೀಡಿದೆ.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಹೇಳಿದರು.
ಇನ್ನು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್ಜಿ ಮೆಹ್ತಾ ಅವರು ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ನ್ಯಾಯ ಪೀಠಕ್ಕೆ ತಿಳಿಸಿದರು.