ಕೋಲ್ಕತ್ತಾ, ಏ 11 (DaijiworldNews/AA): ನಾವು ಸಿಎಎ, ಎನ್ಆರ್ಸಿ, ಯುಸಿಸಿಯನ್ನು ಒಪ್ಪಿಕೊಳ್ಳುವುದಿಲ್ಲ. ಏಕರೂಪ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಸಿಎಎ, ಎನ್ಆರ್ಸಿ, ಯುಸಿಸಿಯನ್ನು ವಿರೋಧಿಸಿ ಮಾತನಾಡಿದ ಅವರು, ದೇಶಕ್ಕಾಗಿ ರಕ್ತ ಸುರಿಸಲು ನಾವು ಸಿದ್ಧರಾಗಿದ್ದೇವೆ. ಆದರೆ ಹಿಂಸೆಯನ್ನು ನಾವು ಸಹಿಸುವುದಿಲ್ಲ. ನಾನು ಎಲ್ಲಾ ಧರ್ಮಗಳಲ್ಲಿ ಸಾಮರಸ್ಯವನ್ನು ಬಯಸುತ್ತೇನೆ. ಚುನಾವಣಾ ಸಮಯದಲ್ಲಿ ಕೆಲವರ ಅಜೆಂಡಾಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.
ಇನ್ನು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೆಲವರು ಗಲಭೆ ಸೃಷ್ಟಿಸಲು ಬಯಸುತ್ತಿದ್ದಾರೆ. ಅಂತವರ ಸಂಚಿಗೆ ಒಳಗಾಗದೆ, ನಾವು ಒಗ್ಗಟ್ಟಿನಿಂದ ಇರಬೇಕು. ಆಗ ಯಾರೂ ನಮಗೆ ತೊಂದರೆ ಕೊಡಲು ಸಾಧ್ಯವಾಗುವುದಿಲ್ಲ ಎಂದರು.