ಬೆಂಗಳೂರು, ಏ. 14(DaijiworldNews/AK):ಲೋಕಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ದಿನವೇ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಮ್ಮ ಪ್ರಣಾಳಿಕೆಯನ್ನೂ ಪ್ರಕಟಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಘೋಷಿಸುವ ಮೂಲಕ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ. ಪ್ರಧಾನಿ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ
'