ಮಡಿಕೇರಿ, ಏ. 14(DaijiworldNews/AA): ಎಚ್.ಡಿ.ಕುಮಾರಸ್ವಾಮಿ ಹೇಳುವ ಮೂಲಕ ಕೇವಲ ಸ್ತ್ರೀಯರಿಗೆ ಮಾತ್ರವಲ್ಲ, ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಮಡಿಕೇರಿಯಲ್ಲಿ ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೆಚ್ ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಹೆಣ್ಣು ಮಕ್ಕಳಿಗೆ ಅವಮಾನ ಮಾಡುವಂತಹ ಇಂತಹ ಹೇಳಿಕೆಗೆ ನನಗೆ ಕುಮಾರಸ್ವಾಮಿಯಿಂದ ಸ್ಪಷ್ಟನೆ ಬೇಕಿಲ್ಲ. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀಡಬೇಕು. ಇಂತಹವರನ್ನು ಎನ್ ಡಿ ಎ ಮೈತ್ರಿಕೂಟದಲ್ಲಿಟ್ಟುಕೊಳ್ಳುತ್ತೀರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಆಗ್ರಹಿಸಿದರು.
ಇದು ತಾಯಿ ಚಾಮುಂಡೇಶ್ವರಿಗೆ ಮಾಡಿದ ಅವಮಾನ. ಯಾರು ಲೆಕ್ಕ ಇಡದಿದ್ದರೂ ಕರ್ಮ ಲೆಕ್ಕ ಇಡುತ್ತದೆ ಎಂಬುದನ್ನು ಕುಮಾರಸ್ವಾಮಿ ಅವರು ಮರೆಯಬಾರದು. ಮುಂದಿನ ದಿನಗಳಲ್ಲಿ ಅವರು ಅದರ ಫಲ ಅನುಭವಿಸಲಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.