ಸೋಲಾಪುರ, ಏ. 14(DaijiworldNews/AA): ಪ್ರಧಾನಿ ಮೋದಿ ಅವರು ದೇಶದ ಪ್ರಜಾಪ್ರಭುತ್ವವನ್ನು ನಿಧಾನವಾಗಿ ನಾಶ ಮಾಡುತ್ತಿದ್ದಾರೆ. ವಿರೋಧ ಪಕ್ಷದ ಯಾರೊಬ್ಬರ ಗೆಲುವನ್ನೂ ಮೋದಿ ಬಯಸುವುದಿಲ್ಲ. ಪ್ರಧಾನಿ ಅವರ ಈ ನಿಲುವು ಅವ ಮತ್ತು ರಷ್ಯಾದ ಪುಟಿನ್ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ತೋರಿಸುತ್ತದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆ ದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದು ಮೋದಿ ಅವರು ಸಂಸದೀಯ ಪ್ರಜಾಪ್ರಭುತ್ವವನ್ನು ನಿಧಾನವಾಗಿ ನಾಶ ಮಾಡುತ್ತಿದ್ದಾರೆ. ಇದು ದೇಶ ನಿರಂಕುಶಾಧಿಕಾರದತ್ತ ಸಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷದಷ್ಟೇ, ವಿರೋಧ ಪಕ್ಷವು ಸಮಾನ ಮಹತ್ವವನ್ನು ಹೊಂದಿದೆ ಎಂದು ಹೇಳಿದರು.