ಚೆನ್ನೈ, ಏ. 15(DaijiworldNews/AA): ಲೋಕಸಭಾ ಚುನಾವಣಾ ಹಿನ್ನೆಲೆ ಜಾರಿಯಾದ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಹಾಗೂ ಕೋಯಮತ್ತೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಅಣ್ಣಾಮಲೈ ವಿರುದ್ಧ 2 ದೂರು ದಾಖಲಾಗಿದೆ.
ಭಾರತೀಯ ದಂಡ ಸಂಹಿತೆಯ 143, 286, 341(8), 290 ಸೆಕ್ಷನ್ ಗಳಡಿ ದೂರು ದಾಖಲಾಗಿರುತ್ತದೆ. ಅಣ್ಣಾಮಲೈ ವಿರುದ್ಧ ಸುಳೂರು ಹಾಗೂ ಸಿಂಗನಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿಗದಿತ ಸಮಯ ಮೀರಿ ಪ್ರಚಾರ ಮಾಡಿದ ಆರೋಪದಲ್ಲಿ ಕಳೆದ ವಾರ ಅಣ್ಣಾಮಲೈ , ಕೋಯಮತ್ತೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಮೇಶ್ ಹಾಗೂ ಬೆಂಬಲಿಗರ ವಿರುದ್ಧ ಐಪಿಸಿಯ ವಿವಿಧ ಕಲಂಗಳಡಿ ಪೀಲಮೇಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.