ಚೆನ್ನೈ, ಏ. 15(DaijiworldNews/AK): ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ರಾಹುಲ್ ಗಾಂಧಿ ಹೆಲಿಕಾಪ್ಟರ್ ಹೆಲಿಪ್ಯಾಡ್ ನಲ್ಲಿ ಲ್ಯಾಂ ಡ್ ಆಗುತ್ತಿದ್ದಂತೆಯೇ ಫ್ಲೈ ಯಿಂಗ್ ಸ್ಕ್ವಾ ಡ್ ಅಧಿಕಾರಿಗಳು ಶೋಧ ಕಾರ್ಯ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆ ಸೇರಿದಂತೆ ಚುನಾವಣಾ ಪ್ರಚಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್ ಮೂಲಕ ಆಗಮಿಸುತ್ತಿದ್ದರು ಎನ್ನಲಾಗಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ.