ಹುಬ್ಬಳ್ಳಿ, ಏ. 15(DaijiworldNews/AK): ಕರ್ನಾಟಕದ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
https://daijiworld.ap-south-1.linodeobjects.com/Linode/img_tv247/15-04-2024AKJOSWHI1.jpg
ಇಂದು (ಏ.15) ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಹ್ಲಾದ್ ಜೋಶಿ ಅವರು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಾಥ್ ನೀಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ರಾಘವೇಂದ್ರ ಮಠ, ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದರು. ಬಳಿಕ ಧಾರವಾಡದ ಶಿವಾಜಿ ಸರ್ಕಲ್ನಿಂದ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮುಖಾಂತರ ಸಾಗಿ, ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನನಗೆ ವಿಶ್ವಾಸ ಇದೆ, ಜನರು ಆಶೀರ್ವಾದ ಮಾಡುತ್ತಾರೆ. ಚುನಾವಣೆ ಅಂದ ಮೇಲೆ ತಂತ್ರ, ಕುತಂತ್ರಗಳು ಇರುತ್ತೆ. ಒಂದೊಂದು ಚುನಾವಣೆಯಲ್ಲೂ ಒಂದೊಂದು ತಂತ್ರ. ಆದರೆ, ಜನರು ಆಶೀರ್ವಾದ ಮಾಡುತ್ತಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಗ್ಯಾರಂಟಿ ಎಂದು ಪ್ರಹ್ಲಾದ್ ಜೋಶಿ ಹೇಳಿದರು.