ನವದೆಹಲಿ, ಏ. 15(DaijiworldNews/AA): ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಗುತ್ತಿದ್ದು, ಅಗತ್ಯ ಸೌಲಭ್ಯಗಳನ್ನು ನಿರಾಕರಿಸಲಾಗಿದೆ. ಅವರನ್ನು ಉಗ್ರನಂತೆ ಬಂಧಿಸಲಾಗಿದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಪ ಮಾಡಿದ್ದಾರೆ.
ದೆಹಲಿಯ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ಚುನಾವಣೆಯಲ್ಲಿ ಎಎಪಿ ತನ್ನ ರಾಜಕೀಯ ಪ್ರತಿಸ್ಪರ್ಧಿಯನ್ನು ಇರದಂತೆ ನೋಡಿಕೊಳ್ಳುತ್ತಿದೆ. ಅವರು ಮಾಡಿದ ತಪ್ಪೇನು ಎಂದು ಪ್ರಶ್ನೆ ಮಾಡಿದ್ದಾರೆ.
ಜೈಲಿನ ಒಳಗಿನ ಗಾಜಿನ ಕೋಣೆಯಲ್ಲಿ ಕೇಜ್ರಿವಾಲ್ ಅವರನ್ನು ಭೇಟಿಯಾದ ಮಾನ್ ಅವರು, ದೂರವಾಣಿ ಸಂಪರ್ಕದ ಮೂಲಕ 30 ನಿಮಿಷಗಳ ಕಾಲ ಮಾತನಾಡಿದರು.