ತುಮಕೂರು, ಏ. 19(DaijiworldNews/AA): ಕೇರಳದಲ್ಲಿ ಯಾವುದೇ ಬಟನ್ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇವಿಎಂಗಳ ದೋಷದ ಕುರಿತು ನಾವು ಪ್ರಾರಂಭದಿಂದಲೂ ಹೇಳುತ್ತಿದ್ದೇವೆ. ಈಗಲೂ ವಿದ್ಯುನ್ಮಾನ ಮತಯಂತ್ರ(ಇವಿಎಂ)ದ ಮೇಲೆ ನಮಗೆ ಅನುಮಾನವಿದೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಎಲ್ಲಾ ಕ್ಷೇತ್ರಗಳಲ್ಲಿ ಈ ರೀತಿ ಮಾಡುವುದಿಲ್ಲ. ತುಂಬಾ ಬುದ್ಧಿವಂತಿಕೆಯಿಂದ ಈ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್ ಮಾಡುತ್ತಾರೆ ಎಂಬ ಅನುಮಾನವಿದೆ ಎಂದು ತಿಳಿಸಿದರು.
ಇನ್ನು ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನ ನಡೆದ ಸಂದರ್ಭ 4 ಇವಿಎಂಗಳು ಮತ್ತು ವಿವಿಪ್ಯಾಟ್ ಗಳ ಹೋಲಿಕೆಯಲ್ಲಿ ಬಿಜೆಪಿಗೆ ಒಂದು ಹೆಚ್ಚುವರಿ ಮತ ಬಂದಿದೆ ಎಂಬ ವರದಿಯನ್ನು ಚುನಾವಣಾ ಆಯೋಗ ಗುರುವಾರ ನಿರಾಕರಿಸಿತ್ತು.