ಬೆಂಗಳೂರು, ಏ. 19(DaijiworldNews/AA): ಮಹಿಳೆಯರ ಬಗ್ಗೆ ವಿವಾದಾತ್ಮಕ ನೀಡಿರುವ ಹೇಳಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ನೋಟಿಸ್ ನೀಡಿತ್ತು. ಇದೀಗ ಈ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ.
ಗ್ಯಾರಂಟಿಗಳಿಂದ ಮಹಿಳಯರು ದಾರಿ ತಪ್ಪಿದ್ದಾರೆ ಎಂಬ ಹೆಚ್ ಡಿಕೆ ಹೇಳಿಕೆ ನೀಡಿದ್ದರು. ಆ ಬಳಿಕ ಮಹಿಳೆಯರ ಬಗ್ಗೆ ಅವಮಾನಕರ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ಹೆಚ್ ಡಿಕೆ ಈ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಮಹಿಳಾ ಆಯೋಗ ನೋಟಿಸ್ ನೀಡಿತ್ತು. ಆಯೋಗದ ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ದೂರುಗಳಿಲ್ಲದಿದ್ದರೂ ಸ್ವಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ನೋಟಿಸ್ ನೀಡಲಾಗಿದೆ. ಸೆಕ್ಷನ್ 7 ಕ್ಕೆ ವಿರುದ್ಧವಾಗಿ ಮಹಿಳಾ ಆಯೋಗದ ಅಧ್ಯಕ್ಷೆ ನೋಟಿಸ್ ನೀಡಿದ್ದಾರೆ ಎಂದು ಹೆಚ್ಡಿಕೆ ಪರ ವಕೀಲರು ವಾದ ಮಂಡಿಸಿದ್ದರು.
ವಾದ ಆಲಿಸಿದ ಹೈಕೋರ್ಟ್ ಕಾರಣ ಕೇಳಿ ನೋಟಿಸ್ ನೀಡಿಲ್ಲ, ಸಮನ್ಸ್ ನೀಡಿಲ್ಲ. ಸ್ಪಷ್ಟೀಕರಣ ನೀಡಿ, ಇಲ್ಲವಾದರೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ತೀರ್ಪು ನೀಡಿದೆ.