ರಾಂಚಿ, ಏ.21(DaijiworldNews/AA): ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಇನ್ಸುಲಿನ್ ನೀಡಲು ನಿರಾಕರಿಸಲಾಗುತ್ತಿದೆ ಎಂದು ಅವರ ಪತ್ನಿ ಸುನಿತಾ ಕೇಜ್ರಿವಾಲ್ ಆರೋಪ ಮಾಡಿದ್ದಾರೆ.
ನನ್ನ ಪತಿ ಅರವಿಂದ ಕೇಜ್ರಿವಾಲ್ ರನ್ನು ಕೊಲ್ಲಬೇಕೆಂದಿದ್ದಾರೆ. ಅವರಿಗೆ ಆಹಾರ ತಯಾರಿ ಮಾಡುವುದನ್ನು ಕೂಡ ಕ್ಯಾಮೆರಾದಲ್ಲಿ ಚಿತ್ರೀಕರಿಸಲಾಗುತ್ತಿದೆ. ಇನ್ಸುಲಿನ್ ನಿರಾಕರಿಸಲಾಗುತ್ತಿದ್ದು, ನನ್ನ ಪತಿ ಸಕ್ಕರೆ ಕಾಯಿಲೆ ಹೊಂದಿದ್ದು, ಕಳೆದ 12 ವರ್ಷಗಳಿಂದ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ದಿನನಿತ್ಯ 50 ಯೂನಿಟ್ ಇನ್ಸುಲಿನ್ ನ ಅಗತ್ಯವಿದೆ' ಎಂದು ತಿಳಿಸಿದ್ದಾರೆ.
ಜನರ ಸೇವೆ ಮಾಡಿದ್ದಕ್ಕಾಗಿ ನನ್ನ ಪತಿಯನ್ನು ಜೈಲಿಗೆ ಕಳುಹಿಸಲಾಗಿದೆ. ಇದುವರೆಗೂ ಕೇಜ್ರಿವಾಲ್ ಅವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿರುವುದಿಲ್ಲ. ಬಿಜೆಪಿಯ ವಿರುದ್ಧ ಹೋರಾಡಿ ನಾವು ಗೆಲ್ಲುತ್ತೇವೆ. ಅರವಿಂದ ಕೇಜ್ರಿವಾಲ್ ಹಾಗೂ ಹೇಮಂತ್ ಸೊರೇನ್ ಜೈಲಿನಿಂದ ಹೊರಬರಲಿದ್ದಾರೆ ಎಂದರು.