ಕುಮಾರಗಂಜ್, ಏ.21(DaijiworldNews/AA): ಕೇಸರಿ ಪಕ್ಷದ ಕುತಂತ್ರಕ್ಕೆ ನಾವು ಹೆದರುವುದಿಲ್ಲ ಎಂದು ಟಿಎಂಸಿ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಕುಮಾರಗಂಜ್ ಲೋಕಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ, ರಾಜ್ಯ ಸಚಿವ ವಿಪ್ಲವ್ ಮಿತ್ರ ಅವರ ಪರವಾಗಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಟಿಎಂಸಿ ಮುಖಂಡರು ಮತ್ತು ಪಶ್ಚಿಮ ಬಂಗಾಳದ ಜನರ ವಿರುದ್ಧದ ಷಡ್ಯಂತ್ರದ ಬಗ್ಗೆ ಎಚ್ಚರದಿಂದ ಇರುವಂತೆ ನಾನು ಎಲ್ಲರನ್ನೂ ಕೇಳಿಕೊಳ್ಳುತ್ತೇನೆ ಎಂದರು.
ಬಿಜೆಪಿಯು ತನ್ನನ್ನು ಮತ್ತು ಸೋದರಳಿಯ, ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಗುರಿಯಾಗಿಸಿಕೊಂಡಿದೆ. ತಾವು ಸುರಕ್ಷಿತವಲ್ಲ ಎಂದು ಅವರು ಆರೋಪಿಸಿದ್ದಾರೆ.