ಬೆಂಗಳೂರು, ಏ. 28(DaijiworldNews/AA): ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿದೆ. ಬಿಜಯ ಕುಮಾರ್ ಸಿಂಗ್ ತಂಡದ ಮುಖ್ಯಸ್ಥರಾಗಿರುತ್ತಾರೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ ಮರುದಿನವೇ ಪ್ರಕರಣ ಹೊಸ ತಿರುವು ಪಡೆದಿದೆ.