ಬೆಳಗಾವಿ, ಏ.29(DaijiworldNews/AA): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಲಿ ಶಾಸಕ ಹೆಚ್ ಡಿ ರೇವಣ್ಣ ಅವರು ಮುಖ್ಯ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಎರಡನೇ ಆರೋಪಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ. ಎಷ್ಟು ಹೆಣ್ಣುಮಕ್ಕಳ ಜೊತೆಗೆ ಹೀಗಾಗಿದೆ ಎಂದು ಎಣಿಸಲು ಆಗಲ್ಲ. 16 ವರ್ಷದಿಂದ 50 ವರ್ಷದ ವರೆಗೆ ಮಹಿಳೆಯರಿದ್ದಾರೆ. ಇದರಲ್ಲಿ ಮನೆ ಕೆಲಸದವರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಇದ್ದಾರೆ. ಹೆದರಿಸಿ ಬೆದರಿಸಿ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಅವರು ವಿಕೃತ ಕಾಮಿಗಳು ಎಂದು ಹೇಳಿದ್ದಾರೆ.
ನನಗೆ ವಿದೇಶದಿಂದ ಪೋನ್ ಕರೆಗಳು ಬರುತ್ತಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಜೆಪಿ ನಾಯಕರು ಇದರ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ್ಲ ಹುಬ್ಬಳ್ಳಿಯ ಘಟನೆ ಬಗ್ಗೆ ಎಲ್ಲ ಜಿಲ್ಲೆಗಳಲ್ಲಿ ಧರಣಿ ಮಾಡಿದರು. ಧೀಮಂತ ಬಿಜೆಪಿ ನಾಯಕರಿಗೆ ಈ ಹೆಣ್ಣು ಮಕ್ಕಳು ಕಾಣಿಸುತ್ತಿಲ್ಲವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.