ಬೆಂಗಳೂರು, ಏ.29(DaijiworldNews/AA): ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಯಾರೇ ದೂರು ಕೊಟ್ಟರು ಅವರಿಗೆ ರಕ್ಷಣೆ ಕೊಡುವ ಕೆಲಸ ಮಾಡ್ತೀವಿ. ಎಸ್ಐಟಿ ಅವರು ತನಿಖೆ ನಡೆಸಿ ಪ್ರಜ್ವಲ್ ರೇವಣ್ಣ ಅವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು. ಜರ್ಮನಿ ಇರಲಿ, ಎಲ್ಲೇ ಇರಲಿ ಅವರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶಿಸಲಿ ಎಂದು ಅಖಿಲ ಭಾರತ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆವೊಬ್ಬರು ಇವತ್ತು ದೂರು ನೀಡಿದ್ದಾರೆ. ನಾನು ಸಂತ್ರಸ್ತರಿಗೆ ಮನವಿ ಮಾಡುತ್ತೇನೆ, ಹೊರಗೆ ಬಂದು ದೂರು ಕೊಡಬೇಕು. ಅವರಿಗೆ ರಕ್ಷಣೆ ಕೊಡುತ್ತೇವೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಉತ್ತಮ ಕೆಲಸ ಮಾಡಿದೆ. ರಾಜ್ಯ ಸರ್ಕಾರ ಸಹ ಎಸ್ಐಟಿ ರಚಿಸಿದೆ. ಈ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು.