ನವದೆಹಲಿ, ಏ. 30(DaijiworldNews/AA): ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಭಾರತದ 26ನೇ ನೌಕಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಅಡ್ಮಿರಲ್ ಆರ್. ಹರಿ ಕುಮಾರ್ ಅವರು 2 ವರ್ಷ ಮತ್ತು 5 ತಿಂಗಳುಗಳ ಕಾಲ ಈ ಹುದ್ದೆಯಲ್ಲಿದ್ದು ಸೇವೆ ಸಲ್ಲಿಸಿದ್ದರು. ಇದೀಗ ಅವರ ಬಳಿಕ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರು ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲು ನೇಮಕಗೊಂಡಿದ್ದಾರೆ.
ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ನೌಕಾಪಡೆಯು ಯುದ್ಧಕ್ಕೆ ಸಿದ್ಧವಾದ ಶಕ್ತಿಯಾಗಿ ವಿಕಸನಗೊಂಡಿದೆ. ಆತ್ಮನಿರ್ಭರ್ತದ ಕಡೆಗೆ ನೌಕಾಪಡೆಯ ನಡೆಯುತ್ತಿರುವ ಪ್ರಯತ್ನಗಳನ್ನು ಬಲಪಡಿಸುವುದು ಮತ್ತು ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುವುದು ನನ್ನ ಆದ್ಯತೆಯಾಗಿದೆ ಎಂದಿದ್ದಾರೆ.