ದೆಹಲಿ, ಮೇ.1(DaijiworldNews/AA): ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ದೆಹಲಿ ಕಾಂಗ್ರೆಸ್ ನ ಮಾಜಿ ಶಾಸಕರಿಬ್ಬರು ರಾಜೀನಾಮೆ ನೀಡಿದ್ದಾರೆ.
ಶಾಸಕರಾದ ನೀರಜ್ ಬಸೋಯಾ ಹಾಗೂ ನಸೀಬ್ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುತ್ತಾರೆ. ರಾಜೀನಾಮೆ ನೀಡುತ್ತಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರದಲ್ಲಿ ದೆಹಲಿಯಲ್ಲಿ ಎಎಪಿ ಕಳೆದ 7 ವರ್ಷಗಳಿಂದ ಅಧಿಕಾರದ್ದು, ಈ ಅವಧಿಯಲ್ಲಿ ಎಎಪಿ ಹಲವಾರು ಹಗರಣಗಳಲ್ಲಿ ಭಾಗಿಯಾಗಿದ್ದು ನಾವು ಮತ್ತೆ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಅವಮಾನಕರಿಯಾಗಿದೆ. ಈಗಾಗಲೇ ಸಿಎಂ ಅರವಿಂದ್ ಕೇಜ್ರಿವಾಲ್, ಎಎಪಿ ಹಿರಿಯ ನಾಯಕರಾದ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದಾರೆ. ಹಾಗೂ ಪಕ್ಷದ ಇತರೆ ಮುಖಂಡರುಗಳ ವಿರುದ್ಧ ಮದ್ಯ ಹಗರಣ, ಜಲ ಮಂಡಳಿ ಹಗರಣ ಸೇರಿದಂತೆ ವಿವಿಧ ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ. ಇಂತಹವರೊಂದಿಗೆ ನಮ್ಮ ಮೈತ್ರಿ ಸರಿಯಲ್ಲವೆಂದು ತಿಳಿಸಿದ್ದಾರೆ.