ಯಾದಗಿರಿ, ಮೇ.1(DaijiworldNews/AA): ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ ಗೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಾದಗಿರಿಯ ತಾಲೂಕೊಂದರಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೇ ಯೋಜನೆ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ. ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ ಎಂದು ಪ್ರಶ್ನಿಸಿದ್ದಾರೆ.
ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ? ಕುಮಾರಸ್ವಾಮಿಯೊಂದಿಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಅವರು ಕೇಳಿದ್ದಾರೆ.
ಪೆನ್ ಡ್ರೈವ್ ಹಿಂದೆ ಡಿಕೆಶಿ ಅವರ ಕೈವಾಡ ಇದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಚಾಲಕನಾಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್ ಡಿಕೆ ಕೇವಲ ರಾಜಕೀಯಕ್ಕಾಗಿ ಡಿಕೆಶಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.