ಕಾರವಾರ, ಮೇ.4(DaijiworldNews/AA): ಚುನಾವಣಾ ಕರ್ತವ್ಯ ಲೋಪ ಎಸಗಿದ ಮೂವರು ಮಂದಿ ಅಧಿಕಾರಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಅವರು ಅಮಾನತುಗೊಳಿಸದ್ದಾರೆ.
ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ನಾಯ್ಕ, ಲಕ್ಷ್ಮಣ್ ಮೊಗೇರ, ಶ್ರೀಧರ ನಾಯ್ಕ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. ಈ ಮೂವರು ಚುನಾವಣಾ ಸಂಬಂಧ ಎಲ್ಲಾ ಕರ್ತವ್ಯದಲ್ಲೂ ನಿರ್ಲಕ್ಷತನ ತೋರಿಸುತ್ತಿದ್ದರು. ಈ ಹಿನ್ನಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.