ಬೆಂಗಳೂರು, ಮೇ.4(DaijiworldNews/AA): ತಾಲಿಬಾನಿ ಕಾಂಗ್ರೆಸ್ (Congress) ಸರ್ಕಾರದಲ್ಲಿ ಹಿಂದೂಗಳಿಗೆ ಇಲ್ಲ ಸುರಕ್ಷತೆ. ಕಾಂಗ್ರೆಸ್ ಬ್ರದರ್ಸ್ಗಳಿಂದ ಹಿಂದೂ ಹೆಣ್ಣು ಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ಬಿಜೆಪಿ ಆರೋಪ ಮಾಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಹುಬ್ಬಳ್ಳಿಯಲ್ಲಿ ಯುವಕನೋರ್ವನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ. ಈ ಹಿಂದೂ ವಿರೋಧಿ ಸರ್ಕಾರ ತೊಲಗಬೇಕು ಎಂದು ಬಿಜೆಪಿ ಕಿಡಿಕಾರಿದೆ.