ಹುಬ್ಬಳ್ಳಿ, ಮೇ.5(DaijiworldNews/AK): ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು. ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗಬೇಕು. ಈ ವಿಚಾರದಲ್ಲಿ ನಮ್ಮ ಪಕ್ಷದ ನಿಲವು ಸ್ಪಷ್ಟವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣ ಹಾಗೂ ರೇವಣ್ಣ ಬಂಧನದ ವಿಚಾರ ಪ್ರತಿಕ್ರಿಯಿಸಿ , ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದರು. ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಗಂಭೀರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ರೇವಣ್ಣ ಬಂಧನವಾಗಿದೆ. ಈ ರೀತಿಯ ಆಗಬಾರದಿತ್ತು. ಹಲವಾರು ಮಹಿಳೆಯರು ದೂರು ಕೊಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು ಎಂದರು.
ರೇವಣ್ಣರಿಗೆ ಸಾಕಷ್ಟು ವಯಸ್ಸಾಗಿದೆ ಇದು ದುರ್ದೈವ. ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ವೀಡಿಯೋ ರಿಲೀಸ್ ಆಗಿರುವುದು ಬೇಸರದ ವಿಚಾರ. ಈ ರೀತಿಯ ಘಟನೆ ಆಗಬಾರದಿತ್ತು. ವೀಡಿಯೋ ನನ್ನದಲ್ಲಾ ಎಂದರೆ ನಾವು ಎಫ್ಎಸ್ಎಲ್ಗೆ ಕಳುಹಿಸುತ್ತವೆ. ವೀಡಿಯೋ ಯಾರು ರಿಲೀಸ್ ಮಾಡಿದರು ಅನ್ನೋದು ಚರ್ಚೆ ವಿಷಯ ಅಲ್ಲ. ಮಹಿಳೆಯರ ಜೊತೆಗೆ ನಡೆದುಕೊಂಡಿರುವ ರೀತಿ ಸರಿಯಾದುದಲ್ಲ ಎಂದು ಅವರು ಹೇಳಿದ್ದಾರೆ.